ಬೆಂಗಳೂರು (ಆಗಸ್ಟ್ 16); ಕರ್ನಾಟಕದಲ್ಲಿ ಮುಂದಿನ ವಿಧಾನ ಸಭಾ ಚುನಾವಣೆಗೆ ಇನ್ನೂ 2 ವರ್ಷ ಬಾಕಿ ಇದೆ. ಆದರೆ, ಅಷ್ಟರಲ್ಲೇ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು? ಎಂಬ ಚರ್ಚೆ ಗರಿಗೆದರಿದೆ. ಸಿಎಂ ಸ್ಥಾನಕ್ಕೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣಗಳು ಪರಿಸ್ಪರ ಕಿತ್ತಾಟ ನಡೆಸುತ್ತಿರುವಾಗಲೇ, ಡಾ.ಜಿ. ಪರಮೇಶ್ವರ್ ಸಹ ದಲಿತ ಸಿಎಂ ಕೋಟಾದ ಅಡಿಯಲ್ಲಿ ರಾಜ್ಯದ ಅಧಿಕಾರದ ಗದ್ದುಗೆಗೆ