ಬೆಂಗಳೂರು: ಕಳೆದ ವಾರದಿಂದ 9-12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಇದೀಗ ಪ್ರಾಥಮಿಕ ಶಾಲಾ ಮಕ್ಕಳಿಗೂ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. 1-8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಒಂದು ವೇಳೆ ಸಲಹಾ ಸಮಿತಿ ತಜ್ಞರು ಪ್ರಾಥಮಿಕ