ಬೆಂಗಳೂರು : ಖ್ಯಾತ ಕವಿ ಚನ್ನವೀರ ಕಣವಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅವರನ್ನು ಜ.14ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ