ಕೋಲಾರ : ಅಂತರ್ಜಾತಿ ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.