ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಇದೇ ತಿಂಗಳ ಅಂತ್ಯದಲ್ಲಿ ಅಂತಿಮ ಸ್ವರೂಪ ನೀಡಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಕಲಬುರಗಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನೀತಿ ಏನಾಗಿರಬೇಕು, ಮುಂದೆ ಅಭಿವೃದ್ಧಿ ಪಥದ ಮೈಲುಗಲ್ಲು ಏನಾಗಿರಬೇಕು ಎನ್ನುವ ಬಗ್ಗೆ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜ್ಯದ ಐದು