ಕೊರೊನಾ ವೈರಸ್ ನಿಂದಾಗಿ ದೇಶದಲ್ಲಿ ಮೊದಲ ಸಾವು ಕಂಡಿರುವ ಕಲಬುರಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಎರಡನೇ ಸಲ ವಿಸ್ತರಣೆ ಮಾಡಲಾಗಿದೆ. ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೆ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮಾರ್ಚ್ 31ರ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ