ಅತಂತ್ರವಾಗಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದರ ಮೂಲಕ ಬಿಜೆಪಿಯನ್ನು ಹೊರಗಿಡುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ನಮ್ಮ ಪಕ್ಷ ಹಾಸನದಲ್ಲಿ ಮೆಜಾರಿಟಿ ಇದೆ. ಮೈಸೂರು ಮತ್ತು ತುಮಕೂರಿನಲ್ಲಿ ಇಬ್ಬರು ಸೇರಿ ಬಿಜೆಪಿಯನ್ನು ಹೊರಗಿಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಯಾರೊಂದಿಗೂ ನಾನು ಮಾತುಕತೆ ನಡೆಸಿಲ್ಲ. ಸದ್ಯ ಸಿದ್ದರಾಮಯ್ಯನವರು ವಿದೇಶಕ್ಕೆ ಹೋಗಿದ್ದಾರೆ.