ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ಕುರಿತ ಆದೇಶ ಇಂದು ಹೊರಬೀಳಲಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಆದೇಶ ಪ್ರಕಟಿಸಲಿದ್ದು, ಅದರಂತೆ ಶ್ರೀಗಳ ಭವಿಷ್ಯ ಇಂದು ನಿರ್ಧಾರಗಳ್ಳಲಿದೆ. ಇನ್ನೊಂದೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮರುಘಾಶ್ರೀ ಅವರು ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಆಂಜಿಯೋಗ್ರಾಮ್ ಬಳಿಕ ಶ್ರೀಗಳ ಬಿಪಿ,