ವಿಧಾನಸಭೆ ಅಧಿವೇಶನದಲ್ಲಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಕುರಿತ ಪ್ರಕರಣ ಸದನದಲ್ಲಿ ಕೋಲಾಹಲ ಸೃಷ್ಟಿಸಿತು. ಗಣಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ಮಾರ್ಟಂ ವರದಿ ಕೊಡಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವೈದ್ಯ ಶೈಲಜಾ ಅವರಿಗೆ ಒತ್ತಡ ಹೇರಿದ್ದಾರೆ ಎನ್ನುವುದು ಸಿಬಿಐ ತನಿಖೆಯಿಂದ ಬಹಿರಂಗವಾಗಿದೆ ಎಂದು ಬಿಜೆಪಿ ಸದಸ್ಯರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಸರಕಾರ ಸಚಿವ ಕೆ.ಜೆ.ಜಾರ್ಜ್ ಬಗ್ಗೆ ಮೃದು ಧೋರಣೆ ತಳೆದಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಜೆ.ಜಾರ್ಜ್