ಸರ್ಕಾರಿ ಶಾಲೆ ಮಕ್ಕಳಿಗೆ ಈ ಬಾರಿ ಸೈಕಲ್, ಶೂ,ಸಾಕ್ಸ್ ವಿತರಣೆ ಮಾಡುವ ಯೋಜನೆಗೆ ಸರ್ಕಾರ ಎಳ್ಳು ನೀರು ಬಿಟ್ಟಿದೆ. ಈ ಬಾರಿ ಬಜೆಟ್ನಲ್ಲಿ ಅನುದಾನ ಮೀಸಲಿಡದ ಕಾರಣ ಈ ಯೋಜನೆಯನ್ನ ಕೈಬಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್, 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆಗೆ ಬ್ರೇಕ್ ಹಾಕಲು ಚಿಂತನೆ ನಡೆಸಲಾಗ್ತಿದೆ. 2019-20 ನೇ ಸಾಲಿನಿಂದಲೇ ಸೈಕಲ್ ವಿತರಣೆ ನಿಲ್ಲಿಸಲಾಗಿತ್ತು,