ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರ್ವಜನಿಕರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿಷೇಧಿಸಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕೆ ಪೂರಕವಾದ ಅಂಶಗಳನ್ನು ಮಸೂದೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು. ಚಾಮರಾಜನಗರಕ್ಕೆ ಭೇಟಿ ನೀಡಿದರೆ ನನ್ನ ಅಧಿಕಾರ ಹೋಗುತ್ತದೆ ಎಂದು ಹಲವು ಜನರು ಹೇಳಿದ್ದರು. ಆದರೆ, ನಾನು ಅಧಿಕಾರ