ಲಾಕ್ ಡೌನ್ ಮಾರ್ಗಸೂಚಿ ಜಿಲ್ಲಾಧಿಕಾರಿಗಳೇ ಬಿಡುಗಡೆ ಮಾಡುವಂತೆ ಸರ್ಕಾರ ಸೂಚನೆ

ಬೆಂಗಳೂರು| pavithra| Last Modified ಮಂಗಳವಾರ, 14 ಜುಲೈ 2020 (10:30 IST)

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಜಿಲ್ಲೆಗಳ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿಗಳ ಹೆಗಲಿಗೆ  ಹಾಕಿದೆ ಎನ್ನಲಾಗಿದೆ.

 

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡುತ್ತಿತ್ತು. ಆದರೆ ಈ ಬಾರಿ ಸರ್ಕಾರ ಲಾಕ್ ಡೌನ್ ಆದ ಜಿಲ್ಲೆಗಳ ಮಾರ್ಗಸೂಚಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಬಿಡುಗಡೆ ಮಾಡುವಂತೆ ಸೂಚಿಸಿದೆ.  ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದೆ.

 
ಇದರಲ್ಲಿ ಇನ್ನಷ್ಟು ಓದಿ :