ರಾಜ್ಯದ 220ಕ್ಕೂ ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಒಂದು ರೂ. ಪರಿಹಾರವನ್ನೂ ನೀಡದೆ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.ನಿನ್ನೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ರೈತರಿಗೆ 2000 ರು. ಬರ ಪರಿಹಾರ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಅದನ್ನೂ ಇನ್ನೂ ಕೊಟ್ಟಿಲ್ಲ ಎಂದರು. ಕೃಷಿ ಕಾರ್ಮಿಕರು ಉದ್ಯೋಗ ಹುಡುಕಿಕೊಂಡು ಗುಳೇ ಹೋಗುವುದನ್ನು ತಡೆಯಲು ಸರ್ಕಾರ ಏನು ಕ್ರಮ