ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸರ್ಕಾರ ನಮಗೆ ಹಿಂದೂಗಳ ಮತಗಳು ಬೇಕಿಲ್ಲ ಎಂದು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಹಿಂದೂಗಳ ಮತಗಳು ಬೇಕಿಲ್ಲ. ನಾವು ಅಲ್ಪಸಂಖ್ಯಾತರ ಮತಗಳಿಂದ ಗೆಲ್ಲುತ್ತೇವೆ ಎಂದು ಹೇಳಲಿ ಎಂದಿದ್ದಾರೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ. ತಾಜಾ