ಮಹಾರಾಷ್ಟ್ರ ಸಿಎಂ ಮಾಡಿದ್ದು ಅಕ್ಷಮ್ಯ ಅಪರಾಧ; ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು| pavithra| Last Updated: ಸೋಮವಾರ, 18 ಜನವರಿ 2021 (11:49 IST)
ಬೆಂಗಳೂರು : ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಸಿಎಂ ಟ್ವೀಟ್ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಮಹಾರಾಷ್ಟ್ರ ಗಡಿ ವಿಚಾರ ಈಗಾಗಲೇ ಇತ್ಯರ್ಥವಾಗಿದೆ. ಮಹಾರಾಷ್ಟ್ರ ಸಿಎಂ ರಾಜಕೀಯ ತೆವಲು ತೀರಿಸಿಕೊಳ್ಳಲು, ರಾಜಕೀಯ ಉಳಿವಿಗಾಗಿ ಇಂತಹ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಒಂದು ಇಂಚು ಭೂಮಿಯೂ ಬಿಟ್ಟು ಕೊಡಲ್ಲ. ಸಿಎಂ ಬಿಎಸ್ ವೈ ಕೂಡ ಪದೇ ಪದೇ ಇದನ್ನೇ ಹೇಳಿದ್ದಾರೆ. ಮಹಾರಾಷ್ಟ್ರ ಸಿಎಂ ಮಾಡಿದ್ದು ಅಕ್ಷಮ್ಯ ಅಪರಾಧ . ಇದನ್ನು ನಾನು ಸಂಪೂರ್ಣವಾಗಿ ಖಂಡಿಸುತ್ತೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :