ಗಾಂಧಿ ಜಯಂತಿಯಂದು ಉದ್ಘಾಟನೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ. ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿರುವ ಟ್ರಾಮಾ ಸೆಂಟರ್ ಅನ್ನು ಮುಂದಿನ ಅಕ್ಟೋಬರ್ ನಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಜಿಮ್ಸ್ ಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿ ಪರಿಶೀಲಿಸಿ ಮಾತನಾಡಿದರು.ಅಗತ್ಯವಾದ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಉಪಕರಣಗಳನ್ನು ತರಿಸುವ ಪ್ರಕ್ರಿಯೆ ಪೂರ್ಣ ಗೊಳಿಸಬೇಕು. ಅಗತ್ಯವಿರುವ ಸಿಬ್ಬಂದಿ