ಕೇರಳದ ಕೋಯಿಕ್ಕೋಡ್ನ ತಡರಾತ್ರಿ ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ಆಗಂತುಕನೊಬ್ಬ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಂಬತ್ತು ಮಂದಿಗೆ ಸುಟ್ಟ ಗಾಯಗಳಾಗಿವೆ. ರಾತ್ರಿ 9.30ರ ಸುಮಾರಿನಲ್ಲಿ ಅಲಪ್ಪುವ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಕಣ್ಣೂರು ಜಿಲ್ಲೆಯ ಮಹಿಳೆ, ಸುಮಾರು ಎರಡು ವರ್ಷದ ಹೆಣ್ಣು ಮಗು ಮತ್ತು ಇನ್ನೊಬ್ಬ ವ್ಯಕ್ತಿಯ ಮೃತದೇಹಗಳು ರೈಲು ಹಳಿಯ ಮೇಲೆ ಪತ್ತೆಯಾಗಿವೆ. ಗಾಯಗೊಂಡಿರುವ 9 ಮಂದಿಯಲ್ಲಿ ಮಹಿಳೆಯರು ಮತ್ತು