ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟ ಜೆಡಿಎಸ್. ಕಾರಣವೇನು ಗೊತ್ತಾ?

ಬೆಂಗಳೂರು, ಸೋಮವಾರ, 25 ಮಾರ್ಚ್ 2019 (12:18 IST)

ಬೆಂಗಳೂರು : ಸೀಟು ಹಂಚಿಕೆ ವೇಳೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಜೆಡಿಎಸ್ ಇದೀಗ ಆ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ 8 ಕ್ಷೇತ್ರಗಳನ್ನು ಪಡೆದುಕೊಂಡಿತ್ತು. ಬೆಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಕೊನೆಗೆ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. 


ಆದರೆ ಇದೀಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲಗೊಂಡ ಹಿನ್ನೆಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ. ಈ ಕುರಿತು ಟ್ವೀಟರ್ ನಲ್ಲಿ ಹೆಚ್.ಡಿ.ದೇವೇಗೌಡರಿಗೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಧನ್ಯವಾದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಓಲಾ ಸಂಚಾರ ನಿಷೇಧ ಆದೇಶ ವಾಪಸ್; ಸಚಿವ ಪ್ರಿಯಾಂಕ್ ಖರ್ಗೆಯ ಕಾಲೆಳೆದ ನೆಟ್ಟಿಗರು

ಬೆಂಗಳೂರು : ಓಲಾ ಸಂಚಾರ ನಿಷೇಧ ಆದೇಶ ವಾಪಸ್ ಪಡೆದುಕೊಂಡಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆಯನ್ನು ಸಾಮಾಜಿಕ ...

news

ಪ್ರಚಾರದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಭ್ಯರ್ಥಿ

ಕಾಶ್ಮೀರ : ಚುನಾವಣಾ ಪ್ರಚಾರದ ವೇಳೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಭ್ಯರ್ಥಿ ಪಾಕಿಸ್ತಾನದ ಪರ ಘೋಷಣೆ ...

news

ಮಂಡ್ಯದಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರದ ದುರುಪಯೋಗವಾಗುತ್ತಿದೆ- ಸುಮಲತಾರಿಂದ ಆರೋಪ

ಮಂಡ್ಯ : ಮಂಡ್ಯದಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರದ ದುರುಪಯೋಗವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ...

news

ನೀತಿ ಸಂಹಿತೆ ಉಲ್ಲಂಘನೆ ; ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್ ಸಿಂಹ ವಿರುದ್ಧ ಎಫ್‍.ಐ.ಆರ್ ದಾಖಲು

ಮೈಸೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ದಿನವೇ ಮೈಸೂರು ...