ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಯಾತ್ರೆ ಮಹಾರಾಷ್ಟ್ರದ ಗಡಿ ಪ್ರವೇಶಿಸಿದ್ದು, ಈ ವೇಳೆ ಕಾಂಗ್ರೆಸ್ ಸೇವಾದಳದ ಮುಖಂಡ ಕೃಷ್ಣಕುಮಾರ್ ಪಾಂಡೆ ನಿಧನರಾಗಿದ್ದಾರೆ. ಪಾಂಡೆ ಅವರು ಕಾಂಗ್ರೆಸ್ನ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ವೇಳೆ ಕುಸಿದು ಬಿದ್ದ ಪಾಂಡೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪಾಂಡೆ