ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಹೊಸಪೇಟೆಯ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ನಡೆಸಿದ ಮಾರಣಾಂತಿಕ ಹಲ್ಲೆ ಪ್ರಕರಣ ಕೈ ನಾಯಕರಿಗೆ ಬಾರಿ ತಲೆಬಿಸಿಯಾಗಿತ್ತು. ಕೊನೆಗೂ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಬಿಡದಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಹೊರ ರಾಜ್ಯದಲ್ಲಿ ಜೆ.ಎನ್.ಗಣೇಶ್ ಅವರನ್ನು ಬಂಧಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದ್ದು, ಇಂದು ಮಧ್ಯರಾತ್ರಿ ಗಣೇಶ್ ಅವರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ