ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ ಆಗುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ. ನವೆಂಬರ್ ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಭರವಸೆಯಲ್ಲಿದ್ದ ಶಾಸಕರುಗಳಿಗೆ ಮತ್ತೆ ನಿರಾಸೆ ಎದುರಾಗುವ ಸಾಧ್ಯತೆ ನಿಚ್ಚಳವಾಗಿದೆ.ಈ ನಡುವೆ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ದೆಹಲಿಯಲ್ಲಿ ಬೀಡು ಬಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕರ ಒತ್ತಡವನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದು ವಿಧಾನ ಮಂಡಲದ