ರಾಜ್ಯದ ಗಡಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ 1.1.2019ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಚಾಮರಾಜನಗರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳು, ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.ಚಾಮರಾಜನಗರ ಜಿಲ್ಲೆಯಲ್ಲಿ 413356 ಪುರುಷರು, 416278 ಮಹಿಳೆಯರು,