ಈ ಜಿಲ್ಲೆಯಲ್ಲಿ ಲಾಕ್ ಡೌನ್ ಇದೀಗ ಮತ್ತಷ್ಟು ಬಿಗಿಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿಗೊಂಡಿದೆ. ಜಿಲ್ಲಾಡಳಿತದಿಂದ ಅಗತ್ಯ ಸೇವೆಗಳ ಪಾಸ್ ಪಡೆದವರನ್ನು ಹೊರತು ಪಡಿಸಿ ಬೇರಾವುದೇ ವಾಹನಗಳ ಸಂಚಾರಕ್ಕೆ ಪೊಲೀಸರು ಅನುಮತಿ ನೀಡುತ್ತಿಲ್ಲ.ಹೊರ ಜಿಲ್ಲೆಗಳಿಂದ ಆಗಮಿಸುವ ಎಲ್ಲ ಬಗೆಯ ವಾಹನಗಳನ್ನು ತಪಾಸಣೆ ಮಾಡಲು ಹತ್ತಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ವಿನಾಕಾರಣ ರಸ್ತೆಗೆ ಇಳಿಯುವ ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗುತ್ತಿದೆ.