ಆಕಸ್ಮಿಕ ಬೆಂಕಿ ತಗುಲಿ ಸಿಮೆಂಟ್ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಲಾರಿ ಸಿಮೆಂಟ್ ತುಂಬಿಕೊಂಡು ಹುಬ್ಬಳ್ಳಿಯಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ-66 ಅರಬೈಲ್ ಘಟ್ಟದ ಮೂಲಕ ಹೊರಟಿತ್ತು. ಈ ವೇಳೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಬೆಂಕಿ ಕೆನ್ನಾಲಿಗೆ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ