ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂದು ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ ವರುಣರಾಯ ಅಬ್ಬರಿಸಲಿದ್ದಾನೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಗ್ರಾಮದ ಬಳಿಯ ಹಳ್ಳ ಉಕ್ಕಿ ಹರಿಯುತ್ತಿತ್ತು. ಆದ್ರೆ ಸಿಮೆಂಟ್ ತುಂಬಿಕೊಂಡು ಬಂದಿದ್ದ ಲಾರಿ ಚಾಲಕ ಹುಚ್ಚಾಟ ಪ್ರದರ್ಶಿಸಿದ್ದಾನೆ. ಹಳ್ಳ ದಾಟುತ್ತಿರುವ ಸಂದರ್ಭದಲ್ಲಿ ಲಾರಿ ಮುಗುಚಿ ಬಿದ್ದಿದೆ. ಲಾರಿ ಬೀಳುತ್ತಿದ್ದಂತೆ ಮೇಲ್ಭಾಗದಲ್ಲಿ ನಿಂತಿರುವ ಚಾಲಕ ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾನೆ. ಗ್ರಾಮಸ್ಥರು ಸ್ಥಳೀಯ