ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರಾ ಅಥವಾ ಮಲಗಿದ್ದಾರಾ ಅನ್ನೋದು ಗೊತ್ತಾಗುತ್ತಿಲ್ಲ. ಹೀಗಂತ ಸಚಿವ ಕೆ.ಎಸ್.ಈಶ್ವರಪ್ಪ ಪೊಲೀಸರ ವಿರುದ್ಧ ಗರಂ ಆಗಿದ್ದಾರೆ. ಶಿವಮೊಗ್ಗದಲ್ಲಿ ಕಳ್ಳರು, ಕೊಲೆಗಾರರಿಗೆ ಭಯ ಇಲ್ಲದಾಗಿದೆ. ರೌಡಿಗಳು ಮಚ್ಚು, ಲಾಂಗ್ ಹಿಡಿದು ಓಡಾಡುತ್ತಿದ್ದಾರೆ. ಆದರೆ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದೂರಿದ್ದಾರೆ.ಅಪರಾಧ ಚಟುವಟಿಕೆಗಳ ನಿಯಂತ್ರಣದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಪೊಲೀಸರಿಂದ ಹೇಗೆ ಕೆಲಸ ಮಾಡಿಸಬೇಕು ಅನ್ನೋದು ಗೊತ್ತಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.