ಕೇಂದ್ರದಿಂದ ಕೊರೊನಾ ನಿರ್ಮೂಲನೆ ಸಾಧ್ಯವಿಲ್ಲ ಎಂದ ಸಚಿವ

ಕಾರವಾರ| Jagadeesh| Last Modified ಶನಿವಾರ, 18 ಜುಲೈ 2020 (14:54 IST)
ಕೊರೊನಾ ವೈರಸ್ ನಿರ್ಮೂಲನೆ ಮಾಡುವುದು ಕೇಂದ್ರ ಸರಕಾರದಿಂದ ಮಾತ್ರ ಸಾಧ್ಯವಿಲ್ಲ.

ಹೀಗಂತ ಸಚಿವರೊಬ್ಬರು ಹೇಳಿದ್ದಾರೆ. ಕೊರೊನಾ ನಿರ್ಮೂಲನೆಗೆ ಸರ್ಕಾರ ಸರ್ವ ಸನ್ನದ್ಧವಾಗಿದೆ. ಪ್ರತಿ ಕ್ಷೇತ್ರಕ್ಕೂ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಬಗ್ಗೆ ಯಾರಲ್ಲೂ ಅನುಮಾನ, ಭಯ ಬೇಡ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.  

ಯಲ್ಲಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಬ್ಬಾರ್, ಕೊರೊನಾ ಸೋಂಕು ನಿರ್ಮೂಲನೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಇದರಲ್ಲಿ ಸಾರ್ವಜನಿಕರ ಪಾತ್ರ ಬಹುಮುಖ್ಯವಾಗಿದೆ ಎಂದರು.

ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರತಿ ಬೂತ್ ಮಟ್ಟದ ಹತ್ತು ಜನ ಪ್ರಮುಖರನ್ನು ಹಾಗೂ ಐದು ಜನ ಅಧಿಕಾರಿಗಳನ್ನು ಒಳಗೊಂಡ `ನಮ್ಮ ಜೀವ ನಮ್ಮ ರಕ್ಷಣೆ' ಹೆಸರಿನ ವಿಶೇಷ ತಂಡವನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.  


ಇದರಲ್ಲಿ ಇನ್ನಷ್ಟು ಓದಿ :