ಕೆಲವು ಖಾಸಗಿ ಆಸ್ಪತ್ರೆಗಳು ಮುಚ್ಚಿರುವ ಅವನ್ನು ತೆರೆಯಬೇಕು ಎಂದು ಸಚಿವರೊಬ್ಬರು ಹೇಳಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ಔಷಧಗಳ ದಾಸ್ತಾನು ಇದೆ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.ಕೊರೊನಾ ವೈರಸ್ ಭೀತಿಯಿಂದ ಜಿಲ್ಲೆಯಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ಬಾಗಿಲು ಮುಚ್ಚಿದೆ. ಹೀಗಾಗಿ ಸಾರ್ವಜನಿಕರು ಸಣ್ಣಪುಟ್ಟ ಖಾಯಿಲೆಗೂ ಸರ್ಕಾರಿ ಆಸ್ಪತ್ರೆಗೆ ಬರಲಾರಂಭಿಸಿದ್ದಾರೆ. ಇದರಿಂದ