ಸಮ್ಮಿಶ್ರ ಸರ್ಕಾರ 5 ವರ್ಷ ಇರುತ್ತೆ. ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಜಗಳ ಸರಿಹೋಗಿದೆ. ಹೀಗಂತ ಸಚಿವ ಹೇಳಿಕೆ ನೀಡಿದ್ದಾರೆ.ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ. ನಮ್ಮ ಸರ್ಕಾರ ಸಂಪೂರ್ಣ ಐದು ವರ್ಷಗಳನ್ನ ಪೂರೈಸುತ್ತದೆ ಎಂದು ನೆಲಮಂಗಲದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಹೇಶ್ ಹೇಳಿದರು. ನೆಲಮಂಗಲದಲ್ಲಿ ಆಯೋಜಿಸಿದ್ದ ಬಿಎಸ್ಪಿ ಸೇರ್ಪಡೆ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಜಾರಕಿಹೊಳಿ ಹಾಗೂ