ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ತಿರುಗೇಟು ನೀಡುವ ಭರದಲ್ಲಿ ಸಚಿವರೊಬ್ಬರು ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠರನ್ನೇ ಟೀಕಿಸಿರುವ ಘಟನೆ ನಡೆದಿದೆ.ಜೆಡಿಎಸ್ ಪಕ್ಷದವರು ರಾಹು ಕೇತುಗಳಂತೆ ಎಂದು ಆರೋಪ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಸಚಿವ ಸಿ.ಎಸ್.ಪುಟ್ಟರಾಜು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಟೀಕಿಸಿ ಪೇಚಿಗೆ ಸಿಲುಕಿದ್ದಾರೆ.ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ಹಾಗೂ ಸಿಎಂ ಕುಮಾರಸ್ವಾಮಿ ಅವರನ್ನು ಬಿಟ್ಟು ನಮ್ಮಲ್ಲಿ ಬೇರೆ