ಅಪಘಾತದಲ್ಲಿ ಗಾಯಾಳುವಾಗಿದ್ದವರನ್ನು ರಕ್ಷಿಸಿ ಮಾನವೀಯತೆ ಮೆರೆದ ಶಾಸಕರ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಶಾಸಕ ರಾಮಪ್ಪ ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಜನಪ್ರತಿನಿಧಿಯಾಗಿದ್ದಾರೆ. ರಾತ್ರಿ ನಡೆದಿದ್ದ ಘಟನೆಯಲ್ಲಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.ಹರಿಹರದ ವಿದ್ಯಾನಗರ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿತ್ತು. ಈ ವೇಳೆ ಬೈಕ್ ನಲ್ಲಿದ್ದ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಲಿಂಗರಾಜ್ ಮತ್ತು ಪತ್ನಿ ಇಬ್ಬರಿಗೂ ತೀವ್ರ ಗಾಯಗಳಾಗಿದ್ದವು. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಶಾಸಕ ರಾಮಪ್ಪ,