ದಲಿತ ಮುಖಂಡ ರಾಹುಲ್ ಬೀಳಗಿ ಕೊಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳಲಾರಂಭಿಸಿದೆ. ಪ್ರಕರಣದ ತನಿಖೆಯಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದು, ಸಿಬಿಐ ತನಿಖೆಗೆ ವಹಿಸುವಂತೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಆಗ್ರಹಿಸಿದ್ದಾರೆ.ಕಲಬುರ್ಗಿ ಜಿಲ್ಲೆಯ ಆಳಂದದ ಜಿಡಗಾ ಕ್ರಾಸ್ ನಲ್ಲಿ ದಲಿತ ಮುಖಂಡ ರಾಹುಲ್ ಬೀಳಗಿ ಕೊಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳಲಾರಂಭಿಸಿದೆ. ಆಳಂದ ತಾಲೂಕಿನಲ್ಲಿ ಬಿಜೆಪಿಯನ್ನು ಬಗ್ಗು ಬಡಿಯಲೆಂದೇ ಕಾಂಗ್ರೆಸ್ ಮುಖಂಡರು ಕೊಲೆ ಮಾಡಿಸಿದ್ದಾರೆ ಎಂದು ಶಾಸಕ ಸುಭಾಷ್ ಗುತ್ತೇದಾರ ಆರೋಪಿಸಿದ್ದಾರೆ.