ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರೈತರ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾ ಮುಂದಿನ ವರ್ಷದಲ್ಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ನಾಲ್ಕು ವರ್ಷಗಳಲ್ಲಿ ಯಾವ ರೀತಿ ಸಾಲ ಮನ್ನಾ ಮಾಡಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಮುಂದಿನ ವರ್ಷ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾಕ್ಕೆ ತೀರ್ಮಾನ ಮಾಡಿದ್ದೇನೆ. ಅದಕ್ಕಾಗಿ ಬಜೆಟ್ನಲ್ಲಿ ಹಣ ಮೀಸಲಿರಿಸುತ್ತೇನೆ ಎಂದಿದ್ದಾರೆ.