ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠದ 20ನೇ ಪೀಠಾಧ್ಯಕ್ಷರಾಗಿ ನಾಗನೂರಿನ ಡಾ. ಸಿದ್ಧರಾಮ ಸ್ವಾಮೀಜಿ ಪದಗ್ರಹಣ ಮಾಡಿದ್ರು. ವಾದ್ಯ ಮೇಳಗಳ ವೈಭವದೊಂದಿಗೆ ನೂತನ ಶ್ರೀಗಳು ಪೀಠ ಅಲಂಕರಿಸಿದ್ದು, ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ.ಗದಗದ ತೋಂಟದಾರ್ಯ ಮಠದ 19ನೇ ಪೀಠಾಧಿಪತಿ ಸಿದ್ದಲಿಂಗ ಶ್ರೀ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಡಾ. ಸಿದ್ಧರಾಮ ಸ್ವಾಮೀಜಿಗಳನ್ನು 20ನೇ ಪೀಠಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ. ಸಿದ್ದರಾಮ