ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸ ಸ್ಪೀಕರ್ ಆಯ್ಕೆ ಕುರಿತು ಚರ್ಚೆ ನಡೆದಿದ್ದು, ಪೈಪೋಟಿ ಶುರುವಾಗಿದೆ.ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಬಿ.ಎಸ್.ಯಡಿಯೂರಪ್ಪ, ಸದನದಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸಿದ್ದಾರೆ. ಈ ಮೂಲಕ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಪೀಕರ್ ಆಯ್ಕೆ ಕುರಿತು ಚರ್ಚೆಗಳು ಶುರುವಾಗಿವೆ.ಮಾಜಿ ಸಿಎಂ, ಶಾಸಕರಾದ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಸುರೇಶಕುಮಾರ್ ಹಾಗೂ ಮಾಜಿ ಸ್ಪೀಕರ್