ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ. ಹೈಕಮಾಂಡ್ ಕೂಡ ಈ ಬಗ್ಗೆ ಪತ್ರ ಬರೆದು ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ 1 ಲಕ್ಷ ಮನೆಗಳ ನಿರ್ಮಾಣ ಯೋಜನೆಯನ್ನು ಬೆಂಗಳೂರಿನಲ್ಲಿ ಅನುಷ್ಠಾನಕ್ಕೆ ತರುವ ಸಂಬಂಧ ಇಂದು ವಿಧಾನಸೌಧದಲ್ಲಿ ವಸತಿ ಸಚಿವ ಕೃಷ್ಣಪ್ಪ, ಕಾರ್ಮಿಕ ಸಚಿವ ಸಂತೋಷ್ಲಾಡ್ ಹಾಗೂ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ.