ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಭೂ ಕುಸಿತದಿಂದ ಪ್ರಮುಖ ಯಾತ್ರಾ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಆಗಿವೆ. ಇದರ ಬಿಸಿ ದೇವಸ್ಥಾನಗಳಿಗೂ ಮುಟ್ಟಿದ್ದು, ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಮುಖಗೊಂಡಿದೆ.