ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಇದೀಗ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಮೂಲ ಕಾಂಗ್ರೆಸಿಗರು ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ ಎನ್ನಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಮೂಲ ಕಾಂಗ್ರೆಸ್ ನಾಯಕರು ಹಾಗೂ ವಲಸೆ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ನಡೆಯುತ್ತಿದ್ದು, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೆಯವರನ್ನು ಆಯ್ಕೆ ಮಾಡುವಂತೆ ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.