ಬಾಗಲಕೋಟೆ : ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ಕೊಟ್ಟ ತಕ್ಷಣ ಸೂಲಿಬೆಲೆ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಪೇಜಾವರ ಶ್ರೀಗಳು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯ ಪರ ಬ್ಯಾಟ್ ಬೀಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಯುವಕರನ್ನು ಸೇರಿಸಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಸದಾನಂದಗೌಡರು ಕೂಡ ಕೇಂದ್ರ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ವೈಯಕ್ತಿಕವಾಗಿ ಹೆಸರು ಹೇಳಿ ಹಾಗೆ ಮಾತಾಡಿಲ್ಲ. ಯಾವ