ಬೆಂಗಳೂರು : ಕೋವಿಡ್ ವೈರಸ್ನ ಹೊಸ ರೂಪಾಂತರ ತಳಿ ‘ಒಮಿಕ್ರಾನ್’ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ, ಹಾಂಕಾಂಗ್ ಹಾಗೂ ಬೋಟ್ಸ್ವಾನಾ ದೇಶಗಳಿಂದ ವಿಮಾನಯಾನ ನಿರ್ಬಂಧಿಸುವಂತೆ ಕೇಂದ್ರ ಸರಕಾರವನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಲ್ಲದೇ, ಕಟ್ಟೆಚ್ಚರದ ಕ್ರಮಗಳನ್ನು ಜಾರಿಗೊಳಿಸುವುದಾಗಿಯೂ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ ಎಂಬ ಸಂದರ್ಭದಲ್ಲೇ ಮೂರು ದೇಶಗಳಲ್ಲಿ ಹೊಸ ರೂಪಾಂತರ ತಳಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಯುರೋಪಿಯನ್