ತನ್ನ ಸಿದ್ಧಾಂತ, ಮೌಲ್ಯಗಳನ್ನು ಗಾಳಿಗೆ ತೂರಿರುವ ಜೆಡಿಎಸ್ ಪಕ್ಷದಿಂದ ‘ಜಾತ್ಯತೀತ ತೆಗೆದು ಹಾಕಬೇಕಾಗಿದೆ. ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಕೇವಲ ಕುಟುಂಬದ ಪಕ್ಷ ಅಷ್ಟೆ. ಸದ್ಯದಲ್ಲೇ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸಂಪೂರ್ಣ ವಿಲೀನ ಆದರೂ ಆಶ್ಚರ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯವನ್ನ ನುಡಿದಿದ್ದಾರೆ.