ನಗರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಗಳಲ್ಲಿ ಓಡಾಡುವವರ ಮೇಲೆ ದಾಳಿ ಮಾಡುತ್ತಿವೆ. ಹೀಗಾಗಿ ಕೆಲ ನಗರಗಳಲ್ಲಂತೂ ಜನರು ಮನೆಯಿಂದ ಹೊರ ಬರುವುದಕ್ಕೆ ಭಯ ಪಡುವಂತಾಗಿದೆ. ಪ್ರತಿದಿನ 70 ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸುತ್ತಿವೆ. ಇನ್ನೂ ಒಂದೇ ತಿಂಗಳಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನರ ಮೇಲೆ ನಾಯಿಗಳು ಅಟ್ಯಾಕ್ ಮಾಡಿವೆ. 2020ರಿಂದ ಇಲ್ಲಿಯವರೆಗೆ 52 ಸಾವಿರಕ್ಕೂ ಹೆಚ್ಚು ಜನರಿಗೆ ಶ್ವಾನಗಳು ಕಚ್ಚಿವೆ.