ಮಲೆನಾಡು ಭಾಗದಲ್ಲಿ ಮಾನವ-ಪ್ರಾಣ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೃಷಿಕರು, ಬೆಳೆಗಾರರು ಜೀವ ಭಯದಲ್ಲೇ ದಿನ ದೂಡಬೇಕಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಲೇ ಪ್ರಾಣ ಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಜಿಲ್ಲಾ ವಕ್ತಾರ ಹೊಲದಗದ್ದೆ ಗಿರೀಶ್ ಒತ್ತಾಯಿಸಿದ್ದಾರೆ. ಕಾಡಾನೆಗಳ ನಿರಂತರ ದಾಳಿಯ ನಡುವೆ ಇತ್ತೀಚೆಗೆ ಕಾಡು ಕೋಣಗಳ ಹಾವಳಿಯೂ ವಿಪರೀತವಾಗಿದ್ದು, ಜೀವ ಹಾನಿ ಜೊತೆಗೆ ಅಪಾರ ಪ್ರಮಾಣದ ಬೆಳೆಯನ್ನೂ ಹಾನಿಗೀಡುಮಾಡುತ್ತಿದೆ. ಕೆಲವೇ ತಿಂಗಳ ಹಿಂದೆ ಕಳಸಾ