ರಾಜ್ಯದ ಇಲಾಖೆಯೊಂದರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ ಎಂದು ಸಚಿವರೊಬ್ಬರು ಹೇಳಿಕೊಂಡಿದ್ದಾರೆ. ಪಶುಸಂಗೋಪನೆ ಇಲಾಖೆಯ 66 ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಜಿಲ್ಲಾ ಉಪನಿರ್ದೇಶಕರನ್ನಾಗಿ ನೇಮಿಸಿ ಪದೋನ್ನತಿ ಆದೇಶ ಹೊರಡಿಸಲಾಗಿದೆ. ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಶುಸಂಗೋಪನೆ ಇಲಾಖೆಯ ಜೇಷ್ಠತಾ ಪಟ್ಟಿ ಹಾಗೂ ಮುಂಬಡ್ತಿಗೆ ಸಂಬಂಧಿಸಿದ ಆದೇಶ ಹೊರಡಿಸಿರುವ ಬಗ್ಗೆ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.ಪಶುಸಂಗೋಪನಾ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ಇಲಾಖಾ ಕಾರ್ಯದರ್ಶಿ, ಹಿರಿಯ