ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಿಎಸ್ಐ ಮಲ್ಲಪ್ಪ ಎಸ್.ಹೂಗಾರ ಅವರ ಪತ್ನಿ ವಿಜಯಲಕ್ಷ್ಮೀ (28) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪಿಎಸ್ಐ ಮಲ್ಲಪ್ಪ ಎಸ್ ಹೂಗಾರ ಅವರು ರಾತ್ರಿ ಪಾಳಿ ಮುಗಿಸಿ ಬೆಳಗ್ಗೆ ಮನೆಗೆ ವಾಪಾಸ್ಸಾದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದ್ದು, ಆದರೆ, ಆತ್ಮಹತ್ಯೆಯ ಕಾರಣ ತಿಳಿದುಬಂದಿಲ್ಲ. ಪಿಎಸ್ಐ ಮಲ್ಲಪ್ಪ ಎಸ್ ಹೂಗಾರ ಮತ್ತು ವಿಜಯಲಕ್ಷ್ಮಿ ಅವರಿಗೆ 6 ವರ್ಷಗಳ