ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಲು ಕಾರಣವೇ ಇವರಂತೆ

ಬೆಂಗಳೂರು| pavithra| Last Modified ಶುಕ್ರವಾರ, 18 ಜನವರಿ 2019 (10:01 IST)
ಬೆಂಗಳೂರು : ರಾಜ್ಯಾಧ್ಯಕ್ಷ ದೆಹಲಿಯಲ್ಲಿದ್ದುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಲು ಮೂಲದ ಜ್ಯೋತಿಷಿಯೊಬ್ಬರು ಕಾರಣ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಹೌದು. ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿದ್ದುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಿ ಸಮ್ಮಿಶ್ರ ಸರ್ಕಾರದಲ್ಲಿ ಅಲೆ ಎಬ್ಬಿಸಿದ್ದರು.

ಕೇರಳ ಮೂಲದ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.


ನಿಮ್ಮ ಗ್ರಹಗತಿ ಬದಲಾಗಿದೆ. ನೀವು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಜನವರಿ 15ರ ಸಂಕ್ರಾಂತಿ ನಂತರ ನಿಮಗೆ ತುಂಬಾ ಒಳ್ಳೆಯದಾಗುತ್ತೆ ಎಂದು ಯಡಿಯೂರಪ್ಪ ಅವರಿಗೆ ಕೇರಳ ಮೂಲದ ಜ್ಯೋತಿಷಿಯೊಬ್ಬರು ಸಲಹೆ ಕೊಟ್ಟಿದ್ದಾರಂತೆ.

ಜ್ಯೋತಿಷಿಯ ಮಾತು ಕೇಳಿ ಕೂಡಲೇ ಕಾರ್ಯಪ್ರವೃತ್ತರಾದ ಬಿಎಸ್‍ವೈ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಗೇ ಈ ನಿಮಗೆ ಒಳ್ಳೆಯ ದಿನ ಎಂದು ಜ್ಯೋತಿಷಿ ಸಲಹೆ ನೀಡಿದ್ದರಿಂದ ನಾಳೆ ಸಿಹಿ ಸುದ್ದಿ ನಿಶ್ಚಿತ ಎಂಬ ನಿರೀಕ್ಷೆಯಲ್ಲಿ ಯಡಿಯೂರಪ್ಪ ಕಾಯುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್
ಲೋಡ್ ಮಾಡಿಕೊಳ್ಳಿ.

ಇದರಲ್ಲಿ ಇನ್ನಷ್ಟು ಓದಿ :