ಮತದಾರರ ಆಶೀರ್ವಾದದಿಂದ ಸರ್ಕಾರ ರಚನೆಗೆ ಅಗತ್ಯವಿರುವ 113 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಚುನಾವಣಾ ಪೂರ್ವ ಸಮೀಕ್ಷಾ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಜೆಡಿಎಸ್ ರಾಜ್ಯದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸಿರುವ ಸಮೀಕ್ಷೆಗಳನ್ನು ಗಣನೆಗೆ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿ ಕಾಂಗ್ರೆಸ್ ಮುಖಂಡ ಚಂದ್ರಪ್ಪ ಹಾಗೂ ಅವರ ಬೆಂಬಲಿಗರು ಮತ್ತು ಬಿಜೆಪಿ ಮುಖಂಡರು ಜೆಡಿಎಸ್ಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು,