ಬರಗಾಲದಿಂದ ತತ್ತರಿಸಿರುವ ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗ ಪ್ರಥಮಾದ್ಯತೆ ಮೇರೆಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಜೆ.ರವಿಶಂಕರ ಅಧಿಕಾರಿಗಳಿಗೆ ಸೂಚಿಸಿದರು.ಕಲಬುರಗಿಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿವಿಧ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ 7 ತಾಲೂಕುಗಳ ಪೈಕಿ 6