ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ತೊಡಗಿರುವ ಆರೋಗ್ಯ ರಕ್ಷಣಾ ಕಾರ್ಯಕರ್ತರಿಗೆ 14 ದಿನಗಳ ಸಾಂಸ್ಥಿಕ (ಇನ್ಸಿಟ್ಯೂಷನಲ್) ಕ್ವಾರಂಟೈನ್ ಅವಶ್ಯಕತೆಯಿಲ್ಲ. ಹೀಗಂತ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.ವಿಜಯಪುರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯಂತೆ ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರು,