ಬಡವರು, ವಲಸೆ ಕಾರ್ಮಿಕರು, ಭೂಮಿರಹಿತ ವಾಸಿಸುವ ಸ್ಥಳ ಗಳಲ್ಲಿ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 268.98 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿಗಳ ನಿರ್ಮಾಣ ಮಾಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಆಡಳಿತಾತ್ಮಕವಾಗಿ ಅನುಮೋದನೆ ದೊರಕಿದೆ.ಪ್ರಸ್ತುತ ರಾಜ್ಯದಲ್ಲಿ 66361 ಅಂಗನವಾಡಿಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ಮೂಲಕ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಗರ್ಭಿಣಿ ಮಹಿಳೆಯರು